
ಬೆಳ್ತಂಗಡಿ; ಅಳದಂಗಡಿ ಸಮೀಪ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.
ಎರಡು ಕಾರುಗಳಲ್ಲಿದ್ದ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದರಲ್ಲಿ ಒಂದಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎರಡೂ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದು ಸ್ಥಳಕ್ಲೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹೆಚ್ವಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.