Home ಅಪರಾಧ ಲೋಕ ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

0

ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಕಾಲೇಜಿನ 17ರ ಹರಯದ ವಿದ್ಯಾರ್ಥಿ ನಿಗೆ ಕಾರ್ಕಳ ನಿವಾಸಿ ಸೈಯ್ಯದ್ (24) ಎಂಬಾತ ಕಳೆದ ಕೆಲವು ದಿನಗಳಿಂದ‌ ನಿರಂತರ ಮೆಸೇಜ್ ಹಾಕುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ಸಯ್ಯದ್(24) ಎಂಬಾತನನ್ನು ಪತ್ತೆಹಚ್ಚಿ ಹಿಗ್ಗ ಮುಗ್ಗ ಥಳಿಸಿದ್ದಾರೆ. ಬಳಿಕ ಈತನನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ಹಲವರು ಯುವತಿಯರ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ಮೇರೆಗೆ ಏ.26 ರಂದು ಆರೋಪಿ ಸಯ್ಯದ್(24) ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು.‌ ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version