Home ಅಪರಾಧ ಲೋಕ ಧರ್ಮಸ್ಥಳ ಯಾತ್ರಾರ್ಥಿ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಧರ್ಮಸ್ಥಳ ಯಾತ್ರಾರ್ಥಿ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

10
0

ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಂದ್ರಪ್ರದೇಶದ ನೆಲ್ಲೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಜೆ ಲತಾ ಎಂಬವರೇ ಚಿನ್ನಾಭರಣಗಳನ್ನು ಕಳೆದುಕೊಂಡವರಾಗಿದ್ದಾರೆ.
ಇವರ ಬ್ಯಾಗಿನಲ್ಲಿದ್ದ 97ಗ್ರಾಂ ತೂಕದ 6,79,000 ಮೌಲ್ಯದ ಚಿನ್ನಾಭರಣಗಳು ಕಳ್ಳತನವಾಗಿದೆ.
ಇವರು ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ವೇಳೆ ಚಿನಗನಾಭರಣಗಳನ್ನು ತನ್ನ ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟಿದ್ದರು.ದೇವರ ದರ್ಶನ ಮುಗಿಸಿ ಬರುವಾಗ ಬ್ಯಾಗ್ ನೋಡಿದಾಗ ಬ್ಯಾಗಿನ ಜಿಪ್ಪು ತೆರೆದಿರುವುದು ಕಂಡು ಬಂದಿದೆ ಬ್ಯಾಗಿನ ಒಳಗೆ ನೀಡಿದಾಗ ಚಿನ್ನಾಭರಣಗಳು ಇರಲಿಲ್ಲ ಎಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here