Home ಅಪರಾಧ ಲೋಕ ಬೆಳ್ತಂಗಡಿ; ವೇಣೂರು ಠಾಣಾ ವ್ಯಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಬೆಳ್ತಂಗಡಿ; ವೇಣೂರು ಠಾಣಾ ವ್ಯಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

22
0

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿ ಯಾಗಿಸಿದ ಘಟನೆ ವೇಣೂರು ಪೊಲೋಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದ್ದು ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿರ್ಲಾಲು ಗ್ರಾಮದ ಸನತ್ (28ವ) ಎಂಬಾತನೇ ಆರೋಪಿಯಾಗಿದ್ದಾನೆ.

ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬಂರುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. ಬಾಲಕಿಯ ಜನ್ಮ ದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಮನೆಯಲ್ಲಿ ಉಳಕೊಂಡಿದ್ದು, ರಾತ್ರಿ ಮಲಗಿದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ನೆಂದು ದೂರಿನಲ್ಲಿ ಆರೋಪಿಸಲಾಗಿದೆ.
ತದನಂತರದ ದಿನಗಳಲ್ಲಿ ಕೂಡಾ ಅಗಾಗ ರಾತ್ರಿ ಕಾಲದಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ದ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 41/2025 ಕಲಂ: 64 BNS-2023 : 4,6 2012ರಂತೆಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here