



ಬೆಳ್ತಂಗಡಿ; ಉಜಿರೆ ಗ್ರಮದ ಬಸ್ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಸುಮಾರು 45ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತವ್ಯಕ್ತಿಯ ಬಗ್ಗೆ ಯಾವುದೇ ಗುರುತುಗಳು ಪತ್ತೆಯಾಗಿಲ್ಲ. ಮೃತದೆಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.
