Home ಸ್ಥಳೀಯ ಸಮಾಚಾರ ಧರ್ಮಸ್ಥಳ; ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ

ಧರ್ಮಸ್ಥಳ; ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ

1
0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮಪಂಚಾಯತು ವ್ಯಾಪ್ತಿಯಲ್ಲಿ ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಗುರುವಾರ ತೆರೆವು ಗೊಳಿಸಲಾಯಿತು.
ಗ್ರಾಮ ಪಂಚಾಯತಿನಿಂದ ಯಾವುದೆ ಪರವಾನಿಗೆ ಪಡೆಯದೆ, ರಸ್ತೆ ಬದಿಯಲ್ಲಿ ಹಾಗು ಅರಣ್ಯ ಪ್ರದೇಶದಲ್ಲಿ ಈ ಅನಧಿಕೃತ ಗೂಡಂಗಡಿಗಳು ಕಾರ್ಯಾಚರಿಸುತ್ತಿದ್ದು
ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.

ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತಗಳು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಸತತವಾಗಿ ತೆರವುಗೊಳಿಸುವಂತೆ ಸೂಚನೆಯನ್ನು ನೀಡಲಾಗಿತ್ತು. ಆದರು ಕೂಡ ತೆರವುಗೊಳಿಸದೆ ಇದ್ದ ಹಿನ್ನಲೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ನಿರ್ಧಾರದಂತೆ ಧರ್ಮಸ್ಥಳ ಗ್ರಾಮ  ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಹಾಗೂ ಸಿಬ್ಬಂದಿ ವರ್ಗದವರು ರಸ್ತೆ ಬದಿಯಲ್ಲಿದ್ದ ಎಲ್ಲ ಗೂಡಂಗಡಿಗಳನ್ನೂ ತೆರವು ಗೊಳಿಸಿದ್ದಾರೆ. ತೆರವು ಕಾರ್ಯಾಚರಣೆಗೆ ಧರ್ಮಸ್ಥಳ ಪೊಲೀಸರು ಸಹಕರಿಸಿದರು

.

LEAVE A REPLY

Please enter your comment!
Please enter your name here