



ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.
ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ. 17ರಂದು ಬೆಳಿಗ್ಗಿನ ಸಮಯ ಮಲಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.
ಘಾನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
