Home ರಾಷ್ಟ್ರ/ರಾಜ್ಯ ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ‌19 ರಿಂದ 22ರ ವರೆಗೆ ಭಾರೀ ಮಳೆ...

ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ‌19 ರಿಂದ 22ರ ವರೆಗೆ ಭಾರೀ ಮಳೆ ನಿರೀಕ್ಷೆ; ಆರೆಂಜ್ ಅಲರ್ಟ್ ಘೋಷಣೆ

35
0

ಬೆಂಗಳೂರು: ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯಾದ್ಯಾಂತ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಬೆಂಗಳೂರು ವಿಭಾಗ ಮಾಹಿತಿ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೇ 18 ರಿಂದ 22ರ ವರೆಗೆ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಅತೀ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌:
ಬೆಳಗಾವಿ, ಧಾರವಾಡ, ಹಾವೇರಿ ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೇ 19 ರಿಂದ 22ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 19 ಹಾಗೂ 20ರಂದು ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here