




ಬೆಳ್ತಂಗಡಿ; ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ 7 ಕಿಮೀ ವ್ಯಾಪ್ತಿಯ ರಸ್ತೆಯ ಸುಮಾರು 6 ಕಡೆಗಳಲ್ಲಿ ಕಿರು ಸೇತುವೆಗಳಿದ್ದು ಅವು ಅಗಲ ಕಿರಿದಾದ ಕಾರಣ ಆಗಾಗ ಅಪಘಾತಗಳು ಸಂಭವಿಸುತ್ತಿವೆ.
