
ಬೆಳ್ತಂಗಡಿ; ದಜ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಇನ್ನೂ ಎರಡು ದಿನ ಮುಂದುವರಿಯುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ರೆಡ್ ಅಲರ್ಟ್ ಹುನ್ನಲೆಯಲ್ಲಿ ಈ ಎರಡೂ ದಿನ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿ ಇದ್ದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.