Home ಸ್ಥಳೀಯ ಸಮಾಚಾರ ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಮೇ 28ರ ವರೆಗೆ ರೆಡ್ ಅಲರ್ಟ್ ಶಾಲಾ ಕಾಲೇಜುಗಳಿಗೆ...

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಮೇ 28ರ ವರೆಗೆ ರೆಡ್ ಅಲರ್ಟ್ ಶಾಲಾ ಕಾಲೇಜುಗಳಿಗೆ ರಜೆ

19
0

ಬೆಳ್ತಂಗಡಿ; ದಜ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಇನ್ನೂ ಎರಡು ದಿನ ಮುಂದುವರಿಯುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌.
ರೆಡ್ ಅಲರ್ಟ್ ಹುನ್ನಲೆಯಲ್ಲಿ ಈ ಎರಡೂ ದಿನ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿ ಇದ್ದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here