ಬೆಳ್ತಂಗಡಿ; ಸಮಾಜದ ಸ್ವಾಸ್ತ್ಯ ಕೆಡಿಸುವಂತೆ ಹಾಗೂ ಮತೀಯ ಗುಂಪುಗಳ ನಡುವೆ ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.
ಮೇ 12 ರಂದು ಬಂಟ್ವಾಳ ಗ್ರಾಮಾಂತರ ಠಾಣಾವ್ಯಾಪ್ತಿಯ ಬಂಟ್ವಾಳ ಕಾವಳ ಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ನಡೆದ ಇತ್ತೀಚೆಗೆ ಕೊಲೆಗೀಡಾದ ಯುವಕನ ಶ್ರದ್ದಾಂಜಲಿ ಸಭಾ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಭಾಗವಹಿಸಿ ಸಮಾಜದ ಸ್ವಾಸ್ತ್ಯ ಹಾಳುಮಾಡುವ ಮತೀಯ ಗುಂಪುಗಳ ನಡುವೆ ವೈಮನಸ್ಯ ವುಂಟುಮಾಡುವಂತೆ ಪ್ರಚೋದನಕಾರಿಯಾಗಿ ಮಾತನಾಡಿದ್ದು ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ತೆಗೆ ದಕ್ಕೆಯುಂಟಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಕಲಂ 353(2)ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ
