Home ರಾಜಕೀಯ ಸಮಾಚಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳಿಗೆ ತುರ್ತು ಪರಿಸ್ಥಿತಿ ಹೇರಿದ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ;ಹರೀಶ್ ಪೂಂಜ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳಿಗೆ ತುರ್ತು ಪರಿಸ್ಥಿತಿ ಹೇರಿದ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ;ಹರೀಶ್ ಪೂಂಜ ಆರೋಪ

55
0

ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಮುಸಲ್ಮಾನರನ್ನು ಓಲೈಸಲು ಸಿದ್ದರಾಮಯ್ಯ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಾಮಾಜಿಕ ಜಾಲತಾಣ‌ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ
ಹಳೆಯ ಭಾಷಣಗಳನ್ನು ಕೆದಕಿ ಹಿರಿಯರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ಪ್ರಕರಣ ದಾಖಲಿಸಿರುವುದು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ನೊಟೀಸ್ ನೀಡಿರುವುದು, ರಾತ್ರೋರಾತ್ರಿ ಸಂಘಟನೆಗಳ ಕಾರ್ಯಕರ್ತರ ಮನೆಗೆ ಪೊಲೀಸರು ನುಗ್ಗಿರುವುದು, 15 ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿರುವುದು ಇವೆಲ್ಲವನ್ನು ನೋಡಿದಾಗ ರಾಜ್ಯದಲ್ಲಿ ಪ್ರಜಾಪ್ರಭುತ್ವ ಸರ್ಕಾರ ಆಡಳಿತ ನಡೆಸುತ್ತಿದೆಯೇ ಎನ್ನುವ ಅನುಮಾನ ಕಾಡುತ್ತಿದೆ.

ಕೋಮುವಾದಿ ಶಕ್ತಿಗಳನ್ನು ಓಲೈಸಲು ಪೊಲೀಸ್ ಇಲಾಖೆಯನ್ನು‌ ದುರುಪಯೋಗಪಡಿಸಿಕೊಂಡರೆ,ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾದೀತು ಎಂದು ಶಾಸಕ ಹರೀಶ್ ಪೂಂಜ ತನ್ನ ಫೇಸ್ ಬುಕ್ ಖಾತೆಯಲ್ಲಿ ಬರೆದಿದ್ದಾರೆ.

LEAVE A REPLY

Please enter your comment!
Please enter your name here