Home ಅಪರಾಧ ಲೋಕ ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; ಬೆಳ್ತಂಗಡಿಯಲ್ಲಿ ಸ್ಥಳ‌ ಮಹಜರು

ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; ಬೆಳ್ತಂಗಡಿಯಲ್ಲಿ ಸ್ಥಳ‌ ಮಹಜರು

48
0

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಸೋಮವಾರ ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಬೆಳ್ತಂಗಡಿಯ ಗುರುವಾಯನಕೆರೆ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ, ಉಜಿರೆಯ ನಿಡಿಗಲ್ ನದಿಯ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದೀಪಕ್ ಮತ್ತು ಸುಮಿತ್ ಆಚಾರ್ಯ ರಹಿಮಾನ್ ಕೊಲೆ ಮಾಡಿದ ಬಳಿಕ ಬೈಕ್ ಮೂಲಕ ಬೆಳ್ತಂಗಡಿ ಕಡೆ ಪ್ರಯಾಣ ಮಾಡಿದ್ದಾರೆ. ಈ ವೇಳೆ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಹೊಸ ರೈನ್ ಕೋಟ್ ಖರೀದಿ ಮಾಡಿ ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಶಾಪ್ ಗೆ ಬಂದು ಸೀಮ್ ರಿಮೂವ್ ಮಾಡುವ ಇಜೆಕ್ಟರ್ ಪಡೆದುಕೊಂಡು ಆರೋಪಿಗಳು ತಮ್ಮ ಮೊಬೈಲ್ ನಿಂದ ಸೀಮ್ ತೆಗೆದು ಮೂರು ಮಾರ್ಗದ ಬಳಿಯ ಚರಂಡಿಗೆ ಸೀಮ್ ಬಿಸಾಕಿ ನೇರ ಕಲ್ಮಂಜ ಗ್ರಾಮದ ನಿಡಿಗಲ್ ನದಿಗೆ ತಮ್ಮ ಮೊಬೈಲ್ ಬಿಸಾಕಿ ಚಿಕ್ಕಮಗಳೂರು ಕಡೆ ಪರಾರಿಯಾಗಿದ್ದರು ಎನ್ನಲಾಗಿದೆ.
ಪೊಲೀಸರಿಗೆ ಆರೋಪಿಗಳು ಬಿಸಾಕಿದ ಸೀಮ್ ಹಾಗೂ ಮೊಬೈಲ್ ಪತ್ತೆಯಾಗಿಲ್ಲ ಎನ್ನಲಾಗಿದೆ.

LEAVE A REPLY

Please enter your comment!
Please enter your name here