Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

0

ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪೋಲಿಸ್ ನಿರೀಕ್ಷಕ ಬಿ.ಜಿ ಸುಬ್ಬಾಪುರಮಠ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜಿ ಸುಬ್ಬಾಪುರಮಠ್ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯನ್ನು ಕದಡುವವರ ವಿರುದ್ಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದ ಅವರು ಬಕ್ರೀದ್ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಜಿಲ್ಲಾ ಪೋಲಿಸ್ ಇಲಾಖೆ ಕೈಗೊಂಡ ಸೂಚನೆಗಳನ್ನು ಸಭೆಯ ಮುಂದಿಟ್ಟರು.

ಸಾರ್ವಜನಿಕರು ಮಾತನಾಡಿ ಸಮಾಜದ ಸ್ವಾಸ್ಥ್ಯ ಕೊಡುವವರು , ದ್ವೇಷ ಭಾಷಣ ಮಾಡುವವರ ವಿರುದ್ಧ ಹಾಗೂ ಅಂತಹ ಕಾರ್ಯಕ್ರಮ ಸಂಘಟಕರ ವಿರುದ್ಧ ಯಾವುದೇ ಮುಲಾಜಿಲ್ಲದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬೀಟ್ ಪೋಲಿಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸದಸ್ಯ , ಕಳಿಯ ಗ್ರಾಮ ಪಂಚಾಯತ್ ಸದಸ್ಯ ಕರೀಂ ಗೇರುಕಟ್ಟೆ , ಎಸ್ಡಿಪಿಐ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ , ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್ , ಮಾಜಿ ತಾಲೂಕು ಪಂಚಾಯತ್ ಸದಸ್ಯರುಗಳಾದ ಪ್ರವೀಣ್ ಗೌಡ ಕೊಯ್ಯೂರು , ಪ್ರಭಾಕರ ಶೆಟ್ಟಿ ಉಪ್ಪಡ್ಕ , ವಿವಿಧ ಸಂಘಟನೆಗಳ ಮುಖಂಡರುಗಳಾದ ಅಬ್ಬೊನು ಮದ್ದಡ್ಕ , ರಫೀಕ್ ಗುರುವಾಯನಕೆರೆ , ಜಲೀಲ್ ಬೆಳ್ತಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದು , ಸಲಹೆ ಸೂಚನೆಗಳನ್ನು ನೀಡಿದರು.

NO COMMENTS

LEAVE A REPLY

Please enter your comment!
Please enter your name here

Exit mobile version