
ಬೆಳ್ತಂಗಡಿ; ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಧನಾಜೆಯಲ್ಲಿ ಎಲ್ ಕೆಜಿ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಎಲ್ ಕೆ ಜಿ ತರಗತಿಯನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಕಲಿಕೆಯೊಂದಿಗೆ ಸಂಸ್ಕಾರವನ್ನು ನೀಡಿ , ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸರ್ಕಾರಿ ಶಾಲೆಯ ಬಗ್ಗೆ ತಾತ್ಸಾರ ಮನೋಭಾವ ಹೊಂದದೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂಬ ಕಿವಿ ಮಾತನ್ನು ಪೋಷಕರಿಗೆ ತಿಳಿಸಿದರು .ಅಂತೆಯೇ ತಾನು ಶಾಲೆಯ ಸಭಾಂಗಣಕ್ಕೆ ಇಂಟರ್ಲಾಕ್ ಮತ್ತು ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆಯನ್ನು ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮಯ್ಯ ಗೌಡ ರವರು ವಿದ್ಯಾರ್ಥಿಗಳ ಸಂಖ್ಯೆ ಇನ್ನಷ್ಟು ಮಗದಷ್ಟು ಹೆಚ್ಚಾಗಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಇಲಿಯಾಸ್, ಗುರುಪ್ರಸಾದ್, ನಾಗವೇಣಿ, ಯುವಕ ಮಂಡಲದ ಅಧ್ಯಕ್ಷರಾದ ಪೀತಾಂಬರ, ಯುವತಿಮಂಡಲದ ಅಧ್ಯಕ್ಷೆ ನವೀನ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಮುನಾ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅನಿಲ್ ಡಿಸೋಜಾ, ಉಪಾಧ್ಯಕ್ಷರಾದ ಬಬಿತಾ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಲಲಿತ ಕುಮಾರಿ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ನಿರಂಜನ್ ದೈಹಿಕ ಶಿಕ್ಷಕರು ಪ್ರಾಸ್ತಾವಿಕ ನುಡಿಯೊಂದಿಗೆ ಗೌರವಾರ್ಪಣೆ ಮಾಡಿದರು ಎಲ್ ಕೆ ಜಿ ತರಗತಿ ಶಿಕ್ಷಕಿ ಅರುಣಾಕ್ಷಿ ಧನ್ಯವಾದ ಸಮರ್ಪಿಸಿದರು ಜಯಲಕ್ಷ್ಮಿ ಸಹ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು