ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೂನ್ 4ರಂದು ಕಡಬ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ನವೀನ್ ನೆರಿಯ ಅವರು ಮಾಡಿದ ಭಾಷಣದಿಂದ ಅಲ್ಲಿ ಸೇರಿದ್ದ ಸಾರ್ವಜನಿಕರು ಅನ್ಯಧರ್ಮದ ವಿರುದ್ದ ದ್ವೇಷ ಭಾವನೆ ಹುಟ್ಟುವಂತೆ ಮಾಡಿರುತ್ತಾರೆ. ಎಂದು ಠಾಣಾ ಎಸ್.ಐ ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
