Home ರಾಷ್ಟ್ರ/ರಾಜ್ಯ ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

16
0

ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ
ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ,ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ ,ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಆಲೋಸಿಸ್ ಲೋಬೊ, ವಕೀಲರಾದ ಪ್ರಶಾಂತ್, ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here