ಮಂಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾನುವಾರವೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಶನಿವರಾ ರಾತ್ರಿಯೂ ಭಾರೀ ಮಳೆ ಸುರಿದಿದ್ದು ಭಾನುವಾರವೂ ಇದು ಮುಂದುವರಿದಿರುವುದು ಆತಂಕ ಮೂಡಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
