ಬೆಳ್ತಂಗಡಿ; ಭಾರೀ ಮಳೆ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಐದು ತಾಲೂಕುಗಳಿಗೆ ರಜೆ ನೀಡಿ ಜಿಲ್ಲಾಧಿ ಕಾರಿಯವರು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿಲ್ಲ.
ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕುಗಳ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
