Home ಅಪಘಾತ ನೆಲ್ಯಾಡಿ ಲಾವತ್ತಡ್ಕದಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿ ಓರ್ವ ಸಾವು ಹಲವರಿಗೆ ಗಾಯ

ನೆಲ್ಯಾಡಿ ಲಾವತ್ತಡ್ಕದಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿ ಓರ್ವ ಸಾವು ಹಲವರಿಗೆ ಗಾಯ

0

ಬೆಳ್ತಂಗಡಿ; ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version