Home ಅಪರಾಧ ಲೋಕ ಬೆಳ್ತಂಗಡಿ : ಓಡಿನ್ನಾಳದಲ್ಲಿ ಜುಗಾರಿ ಆಟ; 9 ಮಂದಿ ಬಂಧನ

ಬೆಳ್ತಂಗಡಿ : ಓಡಿನ್ನಾಳದಲ್ಲಿ ಜುಗಾರಿ ಆಟ; 9 ಮಂದಿ ಬಂಧನ

0

ಬೆಳ್ತಂಗಡಿ : ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಗೆ ಜೂ.17 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಎಲೆಗಳನ್ನು , 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ, 26,778 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version