Home ಸ್ಥಳೀಯ ಸಮಾಚಾರ ಉಪ್ಪಿನಂಗಡಿ; ನದಿ ದಡದಲ್ಲಿ ಕಾಣಿಸಿಕೊಂಡ ಮೊಸಳೆ, ನೋಡಲು ಹೋದ ಜನರತ್ತ ನುಗ್ಗಿದ ಮೊಸಳೆ

ಉಪ್ಪಿನಂಗಡಿ; ನದಿ ದಡದಲ್ಲಿ ಕಾಣಿಸಿಕೊಂಡ ಮೊಸಳೆ, ನೋಡಲು ಹೋದ ಜನರತ್ತ ನುಗ್ಗಿದ ಮೊಸಳೆ

46
0

ಉಪ್ಪಿನಂಗಡಿ; ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು ಮೊಸಳ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಲಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಇಂದು ಸಂಜೆ ನಡೆದಿದೆ.

ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯ ನಿವಾಸಿಗಳಾದ ಅಝೀಝ್ ಪಿಟಿ ಹಾಗೂ ಇತರರಲ್ಲಿ ತಿಳಿಸಿದ್ದು ಅವರು ಅದೇನೆಂದು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು ಮತ್ತೆ ನದಿ ನೀರಿಗೆ ಇಳಿದು ನಾಷ್ಠೆಯಾಗಿದೆ. ಎರಡು ವರ್ಷಗಳ ಹಿಂದೆ ಪಂಜಳದ ನೇತ್ರಾವತಿ ನದಿಯಲ್ಲಿಯೂ ದೊಡ್ಡ ಮೊಸಳೆಗಳೆರಡು ಪ್ರತ್ಯಕ್ಷವಾಗಿದ್ದವು ಕಳೆದ ವರ್ಷ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ಬಳಿಯೂ ನೇತ್ರಾವತಿ ನದಿ ದಡದಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿತ್ತು ನದಿಯಲ್ಲಿ ಮೊಸಳೆಯಿರುವುದು ನದಿಗೆ ಮೀನು ಬೇಟೆಗೆಂದು ಹೋಗುವವರಲ್ಲಿ ಆತಂಕ ಸೃಷ್ಟಿಸಿದೆ.

LEAVE A REPLY

Please enter your comment!
Please enter your name here