Home ರಾಜಕೀಯ ಸಮಾಚಾರ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ನಮಿತಾ ಪೂಜಾರಿ ಅವರಿಗೆ ಅಭಿನಂದನೆ.

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ನಮಿತಾ ಪೂಜಾರಿ ಅವರಿಗೆ ಅಭಿನಂದನೆ.

0

ಬೆಳ್ತಂಗಡಿ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ನಾರಾಯಣ ಗೌಡ ದೇವಸ್ಯ, ಶ್ರೀಮತಿ ಶೋಭಾ ನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಝರ್ ನಾವುರು, ಉಪಾಧ್ಯಕ್ಷರಾದ ಅರುಣ್ ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝೀನತ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಮಧುರ ರಾಘವ, ಸುಮಂಗಲ ಉಜಿರೆ, ಪುಷ್ಪಾ ನೆರಿಯಾ, ವಿಜಯಲಕ್ಷ್ಮಿ, ಹಾಗೂ ಸದಸ್ಯರು ಉಪಸ್ಥಿರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version