ಬೆಳ್ತಂಗಡಿ: ಕೊಯ್ಯರು ಮಲೆಬೆಟ್ಟು ನಿವಾಸಿಯಾಗಿರುವ ರಝೀನ(24ವ) ಎಂಬವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬವರ ಪತ್ನಿಯಾದ ರಝೀನರ 2ವರ್ಷದ ಮಗ 40 ದಿನಗಳ ಹಿಂದೆ ಸಾವನ್ನಪ್ಪಿದ್ದರು. ಬಳಿಕ ಅವರು ಕೊಯ್ಯರಿನ ತಾಯಿ ಮನೆಯಲ್ಲಿದ್ದರು. ರಝೀನ 22-06-2025ರಂದು ಸಂಜೆ 4.00ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದಳು ಆದರೆ ಆಕೆ ಗಂಡನ ಮನೆಗೆ ಹೋಗದಿರುವುದರಿಂದ ಸಂಬಂಧಿಕರು,ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ರಝೀನ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇವರ ಬಗ್ಗೆ ಯಾವುದಾದರೂ ಮಾಹಿತಿ ಲಭ್ಯವಾದರೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ.
