ಬೆಳ್ತಂಗಡಿ; ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಟ್ಟಡೆ ಗ್ರಾಮದ ಪೆರ್ಮುಡ ಕ್ರಾಸ್ ಎಂಬಲ್ಲಿ ಕೆ.ಎ 19 ಎ.ಎ 2615ನಂಬರ್ ನ ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದು ಪ್ರಕರಣದದಲ್ಲಿ ಕೆ.ಎ 19 ಎಇ 0779 ನಂಬರ್ ನ ಈಚರ್ ಮಿನಿ ಲಾರಿಯಲ್ಲಿ ಅಕ್ರಮವಾಗಿ ಮರಳನ್ನು ಸಾಗಾ ಮಾಡುತ್ತಿದ್ದ ವೇಳೆ ನಿಟ್ಟಡೆ ಪೆರ್ಮುಡ ಎಂಬಲ್ಲಜ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿ ಯಾವುದೇ ದಾಖಲೆಗಳಿಲ್ಲದೆ ಮರಳು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಡಿದ್ದಾರೆ.
