Home ರಾಜಕೀಯ ಸಮಾಚಾರ ಕೆಂಪು ಕಲ್ಲು ಮರಳು ಅಭಾವ, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಸಮಸ್ಯೆ; ಬಿ.ಎಂ ಎಸ್. ನಿಂದ...

ಕೆಂಪು ಕಲ್ಲು ಮರಳು ಅಭಾವ, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಸಮಸ್ಯೆ; ಬಿ.ಎಂ ಎಸ್. ನಿಂದ ಮನವಿ

3
0

ಬೆಳ್ತಂಗಡಿ; ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆಯನ್ನು ಅಂಬೇಡ್ಕರ್ ಭವನ ಬೆಳ್ತಂಗಡಿದಲ್ಲಿ ಜರುಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷರಾದ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು ,ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಎಮ್ ಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತವನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.
ಬಿ ಎಂ ಎಸ್ ನ ಜಿಲ್ಲಾಧ್ಯಕ್ಷರಾದ ವಕೀಲ ರಾದ ಅನಿಲ್ ಕುಮಾರ್ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು ಕುಮಾರ್ ‌ನಾಥ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.
ಬಳಿಕ ತಹಶೀಲ್ದಾರ್ ಅವರಿಗೆ ಹಾಗೂ ಪೊಲೀಸ್ ಇಲಾಖೆಗೆ ಈ ಬಗ್ಗೆ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here