

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ
ಉಪ್ಪಿನಂಗಡಿ – ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ – ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ ಈ ಬಗ್ಗೆ ರಾಜ್ಯ ಸರ್ಕಾರ ಈವರೆಗೆ ಯಾವುದೇ ಅನುದಾನ ನೀಡದೆ ಇದ್ದು ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ರಸ್ತೆಯೂ ಕೆರೆಯಂತಾಗಿದ್ದು ಜನ ಓಡಾಡಲು ಕಷ್ಟಪಡುತ್ತಿದ್ದಾರೆ.ಈಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಒತ್ತಾಯಿಸಿ ಜುಲೈ 05 ಶನಿವಾರ,ಬೆಳಗ್ಗೆ 9.30 ಕ್ಕೆ ಸರಿಯಾಗಿ ಕಲ್ಲೇರಿ ಬಸ್ ನಿಲ್ದಾಣ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
