Home ಅಪರಾಧ ಲೋಕ ಧರ್ಮಸ್ಥಳ ಶವ ಹೂತುಹಾಕಿರುವ ಬಗ್ಗೆ ದೂರು ನೀಡಿದ ಪ್ರಕರಣ; ಯಾವುದೇ ಕಳೆಬರವನ್ನು ನೀಡಿಲ್ಲ, ಎಸ್.ಪಿ ಸ್ಪಷ್ಟನೆ

ಧರ್ಮಸ್ಥಳ ಶವ ಹೂತುಹಾಕಿರುವ ಬಗ್ಗೆ ದೂರು ನೀಡಿದ ಪ್ರಕರಣ; ಯಾವುದೇ ಕಳೆಬರವನ್ನು ನೀಡಿಲ್ಲ, ಎಸ್.ಪಿ ಸ್ಪಷ್ಟನೆ

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿಯ ಪರವಾಗಿ ಬಂದ ವಕೀಲರುಗಳು ಯಾವುದೇ ಕಳೇಬರವನ್ನು ಇಲಾಖೆಗೆ ಹಸ್ತಾಂತರಿಸಿಲ್ಲ‌. ಕಳೆ‌ಬರಗದ ಫೊಟೋ ಗಳನ್ನು ಮಾತ್ರ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ:39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ ಬರಹದ ಕುರಿತು ವಿಚಾರಿಸಿರುವುದಾಗಿ ತಿಳಿಸಿದ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್ ಝರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version