ಬೆಳ್ತಂಗಡಿ; ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಅಕ್ರಮವಾಗಿ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ ನಿವಾಸಿ ಅಬ್ದುಲ್ ರಜಾಕ್ ಎಂಬಾತನಿಗೆ ಸೇರಿದ ಅಂಗಡಿ ಇದಾಗಿದ್ದು ಸ್ಥಳದಿಂದ 47ಕೆಜಿ ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಅಂಗಡಿ ಮಾಲಕ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಅಬ್ದುಲ್ ರವೂಫ್ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳು ತಮ್ಮ ಮನೆಯಲ್ಲಿದ್ದ ಜಾನುವಾರನ್ನು ಮಾಂಸಕ್ಕಾಗಿ ವಧೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು ಪೊಲೀಸರು ಆರೋಪಿಗಳ ವಿರುದ್ದ ಕರ್ನಾಟಕ ಗೋವದೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
