

ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ನೂತನವಾಗಿ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರಾಗಿರುವುದಾಗಿ ಕೆ.ಪಿ.ಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ರಾಜ್ಯದಲ್ಲಿ ನೂತನವಾಗಿ 43 ಶಾಲೆಗಳು ಮಂಜೂರಾಗಿದ್ದು ಅದರಲ್ಲಿ ಕಕ್ಕಿಂಜೆಯಲ್ಲಿಯೂ ನೂತನ ಶಾಲೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.










