
ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಇತ್ತೀಚೆಗೆ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿಯಲ್ಲಿ ಇರುವ ಇವರನ್ನು ದಿನಾಂಕ 05.07.2025ರಂದು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಬೇಟಿಯಾಗಿ ಆರೋಗ್ಯ ವಿಚಾರಿಸಿದರು ಈ ಸಂದರ್ಭದಲ್ಲಿ ಸಹಾಯಧನವನ್ನು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಹಸ್ತಾಂತರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಎಂ.ಕೆ ಪ್ರಸಾದ್, ಕೋಶಾಧಿಕಾರಿ ನಾಗೇಶ್ ಆದೇಲು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಕಳಿಯ ಹಾಗೂ ಯುವವಾಹಿನಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.