Home ಸ್ಥಳೀಯ ಸಮಾಚಾರ ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ...

ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

14
0

ಬೆಳ್ತಂಗಡಿ.ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರು ಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಇಂದು ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿ
ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ತಾಲೂಕು ಅಕ್ರಸ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ್ ಕಲೆಂಜ, ತಾಲೂಕು ಗ್ಯಾರಂಟಿ ಅನು ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here