
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಂದಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ ಎಂಬಾತನಾಗಿದ್ದಾನೆ.
ಈತನ ವಿರುದ್ದ
ಮಾನ್ಯ ಬೆಳ್ತಂಗಡಿ ನ್ಯಾಯಲಯ
cc no 205/2016,
ಠಾಣಾ ಅ. ಕ್ರ. 510/2015 ಕಲಂ. 379 ಐಪಿಸಿ.
ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಜು11 ರಂದು
ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ನಾಗೇಶ್ ಕದ್ರಿ, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್ ರವರು ಮಂಗಳೂರು ನಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿದಿಸಲಾಗಿದೆ.