Home ಅಪರಾಧ ಲೋಕ ದೂರುದಾರನ ಗುರುತು ಬಯಲು ಮಾಡಿದವರ ಬಗ್ಗೆ ಪ್ರತ್ಯೇಕ ತನಿಖೆ; ಅಸ್ಥಿಪಂಜರ ಅವಶೇಷಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿದ್ದೇವೆ ಎಸ್.ಪಿ...

ದೂರುದಾರನ ಗುರುತು ಬಯಲು ಮಾಡಿದವರ ಬಗ್ಗೆ ಪ್ರತ್ಯೇಕ ತನಿಖೆ; ಅಸ್ಥಿಪಂಜರ ಅವಶೇಷಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿದ್ದೇವೆ ಎಸ್.ಪಿ ಮಾಹಿತಿ

0
4

ಮಂಗಳೂರು: ‘ಧರ್ಮಸ್ಥಳ’ ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಧರ್ಮಸ್ಥಳ’ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಹೇಳಿಕೆ ನೀಡಿದ್ದಾರೆ.
ಸಾಕ್ಷಿ, ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ ಸಾಕ್ಷಿ, ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್‌ಐಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ, ದೂರುದಾರರ ವಯಸ್ಸು ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತಿತರ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದಾರೆ. ಇದರ ಆಧಾರದಲ್ಲಿ ಸ್ಥಳೀಯ ಅನೇಕರು ಸಾಕ್ಷಿ, ದೂರುದಾರರನ್ನು ಅಂದಾಜಿಸಿರುತ್ತಾರೆ. ಆದರೆ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಡಿಎಸ್ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

NO COMMENTS

LEAVE A REPLY

Please enter your comment!
Please enter your name here