
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಜು. 11 ರಂದು ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಮರಳು ಸಾಗಾಟ ಮಾಡುತ್ತಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದು ವಾಹನದಲ್ಲಿದ್ದ ಮರಳನ್ನು ಹಾಗೂ ಮರಳು ತೆಗೆಯಲು ಉಪಯೋಗಿಸಿದ್ದ ಉಪಕರಣಗಳನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.