
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.
ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಸಹಕರಿಸಿದರು. ಮನೆಯ ಅಡುಗೆಕೋಣೆ ಸಂಪೂರ್ಣ ಸುಟ್ಟು ಹೋಗಿದ್ದು ವ್ಯಾಪಕ ಹಾನಿ ಸಂಭವಿಸಿದೆ.