ಬೆಳ್ತಂಗಡಿ; ಧರ್ಮಸ್ಥಳ ಧಾರ್ಮಿಕ ಶ್ರದ್ದಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಅನ್ನು ಪ್ರಸಾರ ಮಾಡಿದ ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಧರ್ಮಸ್ಥಳ ನಿವಾಸಿ ಚೇತನ್ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಡಾಕ್ಟರ್ ವರ್ಮ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಧರ್ಮಸ್ಥಳದ ಧರ್ಮಿಕಶ್ರದ್ದಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಮತ್ತು ಅಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ 296ಬಿಎನ್ ಎಸ್ 2023ರಂತೆ ಪ್ರಕರಣ ದಾಖಲಿಸಲಾಗಿದೆ
