Home ಅಪರಾಧ ಲೋಕ ಧರ್ಮಸ್ಥಳ ಘಟನೆ ಸಾಕ್ಷಿ ದೂರು ದಾರನ ಗುರುತು ಬಹಿರಂಗ ಪಡಿಸಿದ ಬಗ್ಗೆ ತನಿಖೆ ಆರಂಭ

ಧರ್ಮಸ್ಥಳ ಘಟನೆ ಸಾಕ್ಷಿ ದೂರು ದಾರನ ಗುರುತು ಬಹಿರಂಗ ಪಡಿಸಿದ ಬಗ್ಗೆ ತನಿಖೆ ಆರಂಭ

0

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಹೇಳಿಕೆನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.
ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ಇನ್ನೊಂದು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು 13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾನೆ ಅಲ್ಲದೆ ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದಿರುವುದಾಗಿ ಹೇಳಿದ್ದು ಅದರ ಕಳೇಬರವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದ.
ಇದೇ ದಿನ ನೀಡಿದ್ದ ಪತ್ರಿಕಾಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ಎಸ್.ಪಿ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸದ್ರಿ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು 10ರಂದು ತಕ್ಷಣವೇ ಜಾರಿ ಬರುವಂತೆ ಅನುಮೋದನೆ ನೀಡಿದೆ. ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ ಸಾಕ್ಷಿ ದೂರುದಾರೆನ್ನು ಪ್ರತಿನಿಧಿಸುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್ ಐ ಆರ್ ಪ್ರತಿಯನ್ನು ಮಾದ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ ಸಾಕ್ಷಿ ದೂರು ದಾರನ ವಯಸ್ಸು, ವೃತ್ತಿಯ ಸ್ಥಳ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗ ಪಡಿಸಿರುವುದರಿಂದ ಸ್ಥಳೀಯ ಅನೇಕರು ಸಾಕ್ಷಿ ದೂರುದಾರನನ್ನು ಅಂದಾಜಿಸಿದ್ದಾರೆ.
ಆದರೂ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗ ಪಡಿಸದಿರಲು ನಿರ್ಧರಿಸಲಾಗಿದೆ ಹಾಗೂ ಈ ಬಗ್ಗೆ ಬಂಟ್ವಾಳ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದರು.
ಇದೀಗ ಇದೇ ವಿ ಅರದ ಬಗ್ಗೆ ವಿಚಾರಣೆ ಆರಂಭವಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version