

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.
