ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.
ಕಳೆದ ಭಾನುವಾರ ಅಸೌಖ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು.
ಅವರು ಪುತ್ರ ಭುವನೇಶ್, ಸೊಸೆ, ಮೊಮ್ಮಕ್ಕಳು, ಸಹೋದರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ ಗೇರುಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
