ಬೆಳ್ತಂಗಡಿ (ಜು20):- ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಭಾನುವಾರದಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್ ನಾವೂರು ಆಗಮಿಸಿದ್ದರು. 2024-25ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಕುದ್ರಡ್ಕ ಮಂಡಿಸಿದರು. ನೂತನ ಸಾಲಿನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ವರ್ಷಾ, ಉಪಾಧ್ಯಕ್ಷರಾಗಿ ಇಸ್ಮಾಲಿ ಐ ಬಿ, ಜೊತೆಕಾರ್ಯದರ್ಶಿಯಾಗಿ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ರಿಝ್ವಾನ್ ಬಿಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಅಬ್ಬಾಸ್ ಸಂಜಯನಗರ, ಶೈರೊಝ್ ಉದಯನಗರ ಇವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು.
ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು. ಹನೀಫ್ ವರ್ಷಾ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
