Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ಕಾಡಾನೆ ಹಾವಳಿ ವಿರುದ್ದ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ; ಕಾಡಾನೆ ಹಾವಳಿ ವಿರುದ್ದ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಪ್ರತಿಭಟನೆ

32
0

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ಕ್ರಮ ಕೈಗೊಳ್ಳಬೇಕು, ಎಂದು ಒತ್ತಾಯಿಸಿ ಕೆ.ಎಸ್.ಎಂ.ಸಿ. ಎ ವತಿಯಿಂದ ಜು 21 ಸೋಮವಾರದಂದು ಬೆಳ್ತಂಗಡಿಯಲ್ಲಿ ಮೆರವಣಿಗೆ ನಡೆಸಿ ಅರಣ್ಯಿಇಲಾಖೆಯ ಕಚೇರಿಯ ಎದುರು ಪ್ರತಿಭಟನೆ ನಡೆಸಿ ವಲಯ ಅರಣ್ಯ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆ
ಎಸ್.ಎಂಸಿ ಎ ನಿರ್ದೇಶಕ ಫಾ ಆದರ್ಶ್ ಜೋಸೆಪ್
ಕಾಡುಪ್ರಾಣಿಗಳ ಹಾವಳಿಯಿಂದಾಗಿ ಕೃಷಿಕರು ಬದುಕಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕೃಷಿಕರು ನೋಟಾ ಚಳವಳಿಯಂತಹ ದಾರಿಯನ್ನು ಅನುಸರಿಸಬೇಕಾಗಿ ಬರಲಿದೆ ಎಂದು ಅವರು ಜನಪ್ರತಿನಿಧಿಗಳನ್ನು ಎಚ್ಚರಿಸಿದರು.
ಕೆ.ಎಸ್.ಎಂ.ಸಿ ಎ ಅಧ್ಯಕ್ಷ ಬಿಟ್ಟಿ ನೆಡುನಿಲಂ ಮಾತನಾಡಿ
ಬೆಳ್ತಂಗಡಿ ತಾಲೂಕಿನ ಮಲೆನಾಡಿನ ಭಾಗಗಳಲ್ಲಿ ಕಾಡಾನೆ ಹಾವಳಿ ತೀರಾ ಹೆಚ್ಚಾಗಿದೆ. ಕೃಷಿಕರು ತಮ್ಮ ತೋಟಗಳಿಗೆ ತೆರಳಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಒಬ್ಬ ಕೃಷಿಕ ಆನೆ ದಾಳಿಗೆ ಬಲಿಯಾಗಿದ್ದಾರೆ. ಆನೆಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಹೋರಾಟದ ಮುಂದಿನ ಭಾಗವಾಗಿ ಅರಣ್ಯ ಸಚಿವರನ್ನು ಭೇಟಿಯಾಗಿ ಅವರಿಗೆ ಈ ಬಗ್ಗೆ ಸವಿಸ್ತಾರ ಮನವಿ ಸಲ್ಲಿಸುವುದಾಗಿಯೂ ಅವರು ತಿಳಿಸಿದರು. ನಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ವರಿಸಿದರು.


ಪ್ರತಿಭಟನೆಯನ್ನು ಉದ್ದೇಶಿಸಿ ಚಿಂತಕ ಲಕ್ಷ್ಮೀಶ ಗಬ್ಲಡ್ಕ ಮಾತನಾಡಿದರು.
ಪ್ರತಿಭಟನಾ ಕಾರರಿಂದ ಮನವಿ ಸ್ವೀಕರಿಸಿದ ವಲಯ ಅರಣ್ಯಾಧಿಕಾರಿಯವರು ಕಾಡಾನೆ ಸಮ್ಯೆಗೆ ಕೂಡಲೇ ಸ್ಪಂದಿಸಲಾಗುತ್ತಿದೆ. ಆನೆಗಳು ಬರದಂತೆ ತಡೆಯುವ ನಿಟ್ಟಿನಲ್ಲಿ ಆನೆ ಕಂದಕ ಸೇರಿದಂತೆ ಎಲ್ಲ ವಿಧಾನಗಳನ್ನು ಇಲ್ಲಿ ಮಾಡಲಾಗುತ್ತಿದೆ ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬ ಗುರಿಯೊಂದಿಗೆ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಆರಂಭಿಸಿ
ಮೂರುಮಾರ್ಗದ ಮೂಲಕ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿಯವರೆಗೆ ಮೆರವಣಿಗೆ ಯಲ್ಲಿ ಬಂದ ಸಂತ್ರಸ್ತರು ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಪಿ.ಆರ್.ಒ ಸೆಬಾಸ್ಟಿಯನ್ನ ಪಿ.ಸಿ ಯುವ ಘಟಕದ ಸಂಚಾಲಕ ರೋಬಿನ್ ಓಡಂಪಳ್ಳಿ, ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಧರ್ಮಗುರುಗಳಾದ ಫಾ ರಿಜೊ, ಫಾ. ಥಾಮಸ್, ಫಾ. ಜೋಸೆಫ್, ಮುಖಂಡರುಗಳಾದ ಕ್ಸೇವಿಯರ್ ಪಾಲೇಲಿ, ಕೇಶವ ಪಿ ಬೆಳಾಲು, ದೇವಸ್ಯ ಟಿ.ವಿ ಧರ್ಮಸ್ಥಳ, ರೋಯಿ ಪುದುವೆಟ್ಟು, ಪ್ರದೀಪ್ ಕೆ.ಸಿ ರೆಜಿ, ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here