

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಾರ್ಯ ಸಮೀಪದ ದೆಲಂಪಾಡಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ಜು.24 ರಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೆ ವಿದ್ಯುತ್ವಕಂಬ ಮುರಿದು ರಸ್ತೆಗೆ ಬಿದ್ದಿದೆ.
ನೇತ್ರಾವತಿಯಿಂದ ನಾರ್ಯ ಕಡೆಗೆ ಬರುತ್ತಿದ್ದ ಕಾರಿನ ಚಾಲಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕಿನ ಅಪಘಾತವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಡಿಕ್ಕಿ ಹೊಡೆದು ಕಂಬವು ರಸ್ತೆಗೆ ಅಡ್ಡಲಾಗಿ ಬಿದ್ದು ವಿದ್ಯುತ್ ಕಂಬ ಸಂಪೂರ್ಣ ಹಾನಿಯಾಗಿದೆ, ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಬಸಪ್ಪ ಇವರು ಭೇಟಿ ನೀಡಿದ್ದಾರೆ.
