Home ಅಪರಾಧ ಲೋಕ ಬೆಳ್ತಂಗಡಿ:ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ಪತ್ನಿಗೆ ಕಿರುಕುಳ ನೀಡಿ ಹಲ್ಲೆ ಮಾಡಿ...

ಬೆಳ್ತಂಗಡಿ:ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ಪತ್ನಿಗೆ ಕಿರುಕುಳ ನೀಡಿ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

0
16

ಬೆಳ್ತಂಗಡಿ : ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ಸಿದ್ದರಾಜು ಗೌಡ ಮಗನಾದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ಪತಿ ವಿಶ್ವನಾಥ(24) ಮತ್ತು 22 ವರ್ಷದ ಪತ್ನಿ 22-05-2025 ರಂದು ಮದುವೆಯಾಗಿದ್ದು. ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೊಟೇಲಿಗೆ ಬಂದು ರೂಂ ಪಡೆದು ತಂಗಿದ್ದರು. ಹೊಟೇಲ್ ರೂಂ ನಲ್ಲಿ ಜುಲೈ 22 ರಂದು ರಾತ್ರಿಯೆ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿಗೆ ವಿರುದ್ಧ 22 ವರ್ಷದ ಪತ್ನಿ ನೇರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜುಲೈ 23 ರಂದು ಸಂಜೆ ಬಂದು ಪತಿ ವಿಶ್ವನಾಥ ಎಂಬಾತನ ವಿರುದ್ಧ ದೂರು ನೀಡಿದ್ದಾಳೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ BNS 109,115(1), 85 ,4DP
(ಕೊಲೆಯತ್ನ, ಕೈಯಿಂದ ಹಲ್ಲೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಬೇಡಿಕೆ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪತಿ ವಿಶ್ವನಾಥ್ (24) ನನ್ನು ಜುಲೈ 24 ರಂದು ಉಜಿರೆಯಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಸಿಬ್ಬಂದಿಗಳು
ಬಂಧಿಸಿ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here