


ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ.
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.
