
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಎಸ್ಐ ಲಾರೆನ್ಸ್, ಸೆನ್ ಪೊಲೀಸ್ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ,ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜುಲೈ 30 ರಂದು ಅದೇಶ ಹೊರಡಿಸಿದ್ದಾರೆ.