
ಬೆಳ್ತಂಗಡಿ.ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಮಂಜೂರು ಗೊಳಿಸಿದ, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ರವರಿಗೆ ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿಯ ದಲಿತ ಮುಖಂಡರುಗಳಾದ ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯಾರು, ಸಂಜೀವ ಆರ್, ಬೆಳ್ತಂಗಡಿ, ರಮೇಶ್ ಆರ್ ಬೆಳ್ತಂಗಡಿ, ಎಸ್ ಪ್ರಭಾಕರ್ ಶಾಂತಿಕೋಡಿ ಓಡಿಲ್ನಾಳ ಉಪಸ್ಥಿತರಿದ್ದರು.