
ಬೆಳ್ತಂಗಡಿ, ಜು.31: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ 3ನೇ ದಿನಕ್ಕೆ ಕಾಲಿಟ್ಟಿದೆ.
ಎಸ್ಐಟಿ ಅಧಿಕಾರಿಗಳು ಗುರುವಾರ ಪೂರ್ವಾಹ್ನ 11:30ರ ಸುಮಾರಿಗೆ ನೇತ್ರಾವತಿ ಸ್ನಾನಘಟ್ಟದಲ್ಲಿ 3ನೇ ದಿನದ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಇದೀಗ ನೇತ್ರಾವತಿ ನದಿಯ ಬದಿಯಲ್ಲಿಯೇ ಅಗೆಯುವ ಕಾರ್ಯ ನಡೆಯುತ್ತಿದೆ. ಈ ವರೆಗೆ ಅಗೆದಿರುವ ಎಲ್ಲ ಸ್ಥಳಗಳೂ ನದಿ ಬದಿಯಲ್ಲಿಯೇ ಇದ್ದು
, ಎಲ್ಲೂ ಮೃತದೇಹದ ಅವಶೇಷಗಳು ಪತ್ತೆಯಾಗಿಲ್ಲ. ಈ ನಡುವೆ ಅಗೆಯುವ ಕಾರ್ಯಾಚರಣೆ 3ನೇ ದಿನಕ್ಕೆ ಕಾಲಿಟ್ಟಿದೆ. ಇನ್ನೂ ಅಗೆಯಲಿರು ಎಂಟರ ವರೆಗಿನ ಜಾಗಗಳು ನದಿ ಬದಿಯಲ್ಲಿಯೇ ಇದೆ ಒಂಬತ್ತನೆ ಸ್ಥಳದಿಂದ ನದಿ ಬದಿಯ ಮೇಲಿನ ಭಾಗದಲ್ಲಿ ಅಗೆಯುವ ಕಾರ್ಯ ನಡೆಯಲಿದ್ದು ಈ ಪ್ರದೇಶದಲ್ಲಿ ಮೃತದೇಹಗಳ ಅವಶೇಷಗಳು ಸಿಗುವ ಬಗ್ಗೆ ಸಾಕ್ಷಿ ದೂರುದಾರ ಹೆಚ್ಚಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದು ಅಲ್ಲಿ ಅಗೆಯುವ ವೇಳೆ ಹೆಚ್ಚಿನ ಮಾಹಿತಿಗಳು ಸಿಗಬಹುದುಎನ್ನಲಾಗುತ್ತಿದೆ
ಎಸ್ಐಟಿ ಅಧಿಕಾರಿಗಳ ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರಿನ ಕೆಎಂಸಿ ವೈದ್ಯರ ತಂಡ, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.