


ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ 7 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು ಇಳಿದಿದ್ದಾರೆ.
ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸಾಮಾಜಿಕ ಅರಣ್ಯ ಇಲಾಖೆಯ ಡಿಸಿಎಫ್ ರೋಷಿನಿ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ,ಕಂದಾಯ ವಿಭಾಗ , ಅರಣ್ಯ ಇಲಾಖೆ ಆಗಮಿಸಿದ್ದಾರೆ.
